Skip to content
ಮುಖಪುಟ >> ಮಧ್ಯವರ್ತನೆ >> ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು(ಎನ್.ಎಸ್.ಕ್ಯು.ಎಫ್)

ಸಂಕ್ಷಿಪ್ತ ಪರಿಚಯ

ಮಾನವರ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ(ಎಂ.ಹೆಚ್.ಆರ್.ಡಿ) ಭಾರತ ಸರ್ಕಾರವು ರಾಷ್ಟ್ರೀಯ ಅರ್ಹತಾ ಚೌಕಟ್ಟು(ಎನ್.ಎಸ್.ಕ್ಯು.ಎಫ್) ಎಂಬ ನೂತನ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಮಾರ್ಗಸೂಚಿಯ ಪ್ರಕಾರ ಆರ್.ಎಂ.ಎಸ್.ಎ.ಅಡಿಯಲ್ಲಿ ಅನುಷ್ಟಾನ ಮಾಡಲು ಅವಕಾಶ ಕಲ್ಪಿಸಿದೆ. ಸಾಮಾನ್ಯ ಶಿಕ್ಷಣದಲ್ಲಿ ವೃತ್ತಿ ಶಿಕ್ಷಣದ ವಿಷಯಗಳನ್ನು ವಿದ್ಯಾರ್ಥಿಗಳ ಆಸಕ್ತಿಗನುಗುಣವಾಗಿ ಅಳವಡಿಸಿ ಉದ್ಯೋಗ ನಿರ್ವಹಿಸಲು ಅಗತ್ಯ ಕೌಶಲ್ಯಗಳು ಮತ್ತು ಸಾಮರ್ಥ್ಯಗಳ ಬಗ್ಗೆ ತರಬೇತಿಯನ್ನು ನೀಡುವುದು ಈ ಯೋಜನೆಯ ಮುಖ್ಯ ಉದ್ಧೇಶವಾಗಿರುತ್ತದೆ. ಈ ಯೋಜನೆಯು ವಿದ್ಯಾರ್ಥಿಗಳಿಗೆ ಸ್ವಯಂ ಪ್ರೇರಿತವಾಗಿದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ಮಾತ್ರ ಆಯ್ಕೆ ಮಾಡಿಕೊಳ್ಳಬೇಕಾಗಿದೆ. 9 ರಿಂದ 12ನೇ ತರಗತಿಯವರೆವಿಗೂ ತದನಂತರ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿ.ಎಚ್.ಡಿ.ವರೆವಿಗೂ ಒಟ್ಟು 10 ಹಂತಗಳಲ್ಲಿ ವಿದ್ಯಾರ್ಥಿಗಳು ಅಭ್ಯಾಸ ಮಾಡಬಹುದು.

 

ರಚನೆ, ವಿನ್ಯಾಸ ಮತ್ತು ನಿರ್ವಹಣೆ ಇ-ಆಡಳಿತ ಘಟಕ, ಆಯುಕ್ತರ ಕಛೇರಿ, ಬೆಂಗಳೂರು |
ಎನ್.ಐ.ಸಿ. ಸರ್ವರ್ ಕರ್ನಾಟಕದಲ್ಲಿ ಪ್ರಕಟಿಸಲಾಗಿದೆ.
ಭಾರತ ಸರ್ಕಾರದ ಪೋರ್ಟಲ್